ಏಪ್ರಿಲ್ 27, 2024 

ಬೆಂಗಳೂರಿನ ಎಂವಿಜೆ ಕಾಲೇಜ್ ಆಫ್ ಇಂಜಿನಿಯರಿಂಗ್ ಸಂಸ್ಥೆಯು ಬಹು ನಿರೀಕ್ಷಿತ "ಪ್ರಾಜೆಕ್ಟ್ ಎಕ್ಸ್ಪೋ - 2024" ಕಾರ್ಯಕ್ರಮವನ್ನು ಆಯೋಜಿಸಿತ್ತು. 

 ಇಸ್ರೋ ಸಂಸ್ಥೆಯ ಮುಖ್ಯಸ್ಥರಾದ ಎಸ್. ಸೋಮನಾಥ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. 

 ಎಂವಿಜೆ ಕಾಲೇಜ್ ಆಫ್ ಇಂಜಿನಿಯರಿಂಗ್ ಸಂಸ್ಥೆಯ ಮುಖ್ಯಸ್ಥರಾದ ಡಾ. ಬಿ.ಎನ್. ಸುರೇಶ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. 

"ಪ್ರಾಜೆಕ್ಟ್ ಎಕ್ಸ್ಪೋ - 2024" ದಲ್ಲಿ ಸುಮಾರು 450ಕ್ಕೂ ಹೆಚ್ಚು ಪ್ರಾಜೆಕ್ಟ್ ಗಳನ್ನು ಪ್ರದರ್ಶನ ಮಾಡಲಾಯಿತು. 

  ಈ ಎಕ್ಸ್ಪೋ ದಲ್ಲಿ ಅನೇಕ ಖಾಸಗಿ ಕಂಪನಿಗಳು ಹಾಗೂ ವಿವಿಧ ಕಾಲೇಜುಗಳ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಭಾಗವಹಿಸಿದ್ದರು.