ಮೇ 17, 2024 

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಆಮ್ ಆದ್ಮಿ ಪಕ್ಷದ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು. 

 ಈ ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಉಪಾಧ್ಯಕ್ಷರಾದ ರಮೇಶ್ ಬೆಲ್ಲಂಕೊಂಡ ಅವರು ಮಾತನಾಡಿದರು. 

   ಕೇಂದ್ರ ಮತ್ತು ರಾಜ್ಯ ಸರ್ಕಾರದ ಆಡಳಿತದ ವೈಖರಿಯಿಂದ ರಾಜ್ಯದಲ್ಲಿ ಕನ್ನಡ ಮಾಧ್ಯಮ ಶಾಲೆಗಳ ವೈಫಲ್ಯ ಹಾಗೂ ಕೇಂದ್ರ ಸರ್ಕಾರದ ಹಿಂದಿ ಹೇರಿಕೆಯಿಂದ ಕನ್ನಡ ಭಾಷೆ ನಾಶವಾಗುತ್ತಿದೆ ಎಂದು ರಮೇಶ್ ಬೆಲ್ಲಂಕೊಂಡ ಅವರು ಆರೋಪಿಸಿದರು.