ಮೇ 24, 2024
ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ 'ಕರ್ನಾಟಕ ರಾಜ್ಯ ತಿಗಳ ಕ್ಷತ್ರಿಯ ಮಹಾಸಭಾ'ದ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.
ಈ ಪತ್ರಿಕಾಗೋಷ್ಠಿಯಲ್ಲಿ ಅಧ್ಯಕ್ಷರಾದ ಎ ಎಚ್ ಬಸವರಾಜು ಅವರು ಮಾತನಾಡಿದರು.
ಕಾಂಗ್ರೆಸ್ ಪಕ್ಷದ ನಾಯಕರು ಹಿಂದುಳಿದ ವರ್ಗಕ್ಕೆ ಸೇರಿದ ತಿಗಳ ಸಮುದಾಯದ ಪಿ.ಆರ್. ರಮೇಶ್ ಅವರನ್ನು ವಿಧಾನಪರಿಷತ್ತಿನ ಸದಸ್ಯರನ್ನಾಗಿ ನಾಮ ನಿರ್ದೇಶನ ಮಾಡಬೇಕೆಂದು ಎ. ಎಚ್. ಬಸವರಾಜು ಅವರು ಒತ್ತಾಯಿಸಿದರು.