ಮೇ 30, 2024 

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು "ಅಖಿಲ ಭಾರತ ದಲಿತ ಮಹಾಸಭಾ"ದ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು. 

  ಈ ಪತ್ರಿಕಾಗೋಷ್ಠಿಯಲ್ಲಿ ರಾಜ್ಯಾಧ್ಯಕ್ಷರಾದ ಡಾ|| ಭೀಮರಾಜ್, ರಾಜ್ಯ ಕಾರ್ಯದರ್ಶಿಯಾದ ಎನ್. ಅಮರನಾರಾಯಣ ಅವರು ಮಾತನಾಡಿದರು. 

ನ್ಯಾಯಾಲಯದ ಆದೇಶಗಳಿದ್ದರೂ ಮುಜರಾಯಿ ಇಲಾಖೆಯಲ್ಲಿ ನೆನೆಗುದಿಗೆ ಬಿದ್ದಿರುವ ದಲಿತರ ಬೇಡಿಕೆಗಳನ್ನು ತುರ್ತಾಗಿ ಈಡೇರಿಸಬೇಕೆಂದು ಒತ್ತಾಯಿಸಿದರು.

   ಜೊತೆಗೆ ತುಮಕೂರು ಜಿಲ್ಲೆಯಲ್ಲಿ ದಲಿತರ ಮೇಲೆ ದೌರ್ಜನ್ಯ ನಡೆದಿದ್ದು ಸ್ಥಳೀಯ ಪೊಲೀಸರು ಯಾವುದೇ ಕಾನೂನು ಕ್ರಮ ಕೈಗೊಂಡಿಲ್ಲವೆಂದು ಆರೋಪಿಸಿದರು.