ಜೂನ್ 15, 2024
ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು 'ರಾಷ್ಟ್ರೀಯ ಗೃಹ ಕಾರ್ಮಿಕರ ಮಂಡಳಿ - ಕರ್ನಾಟಕ' ಸದಸ್ಯರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.
ಗೃಹ ಕಾರ್ಮಿಕರಿಗೆ ಮಾನವ ಘನತೆ ಮತ್ತು ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿಯಬೇಕೆಂದು ರಾಷ್ಟ್ರೀಯ ಗೃಹ ಕಾರ್ಮಿಕರ ಮಂಡಳಿ - ಕರ್ನಾಟಕ' ಸದಸ್ಯರು ಒತ್ತಾಯಿಸಿದರು.
ಕರ್ನಾಟಕ ರಾಜ್ಯದಾದ್ಯಂತ ಸಾವಿರಾರು ಮಹಿಳಾ ಗೃಹ ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ ಅವರು ಅನೇಕ ಸಮಸ್ಯೆಗಳಿಂದ ಬಳಲುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬೆಂಗಳೂರು ನಗರದಲ್ಲಿ ಸುಮಾರು 10 ಸಾವಿರಕ್ಕೂ ಹೆಚ್ಚು ಮಹಿಳಾ ಗೃಹ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಆದರೆ ಅವರನ್ನು ಮನೆಯ ಮಾಲೀಕರು ಕೀಳಾಗಿ ನೋಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು. ಸಾವಿರಾರು ಮಹಿಳಾ ಗೃಹ ಕಾರ್ಮಿಕರಿಗೆ ಮೂಲಭೂತ ಸೌಕರ್ಯಗಳು ಸಿಗುತ್ತಿಲ್ಲ. ಹಾಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆಗಳು ಗೃಹ ಕಾರ್ಮಿಕರಿಗೆ ಸರ್ಕಾರದ ಎಲ್ಲ ಸೌಲಭ್ಯಗಳು ಸಿಗುವಂತೆ ಮಾಡಬೇಕು ಎಂದು ಒತ್ತಾಯಿಸಿದರು.
ಈ ಪತ್ರಿಕಾಗೋಷ್ಠಿಯಲ್ಲಿ ಅಧ್ಯಕ್ಷರಾದ ಮಂಜುಳಾ, ಸಹಾಯ, ಮಮತಾ, ಶಶಿಕಲಾ ಅವರು ಭಾಗಿಯಾಗಿದ್ದರು.