ಜೂನ್ 28, 2024

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು "RUPSA - ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ ಕರ್ನಾಟಕ"ದ ಸದಸ್ಯರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು. 

 ರಾಜ್ಯ ಸರ್ಕಾರವು ಶಾಲಾ ಮಕ್ಕಳ ಪಠ್ಯಪುಸ್ತಕಗಳ ದರವನ್ನು ಹೆಚ್ಚಳ ಮಾಡಿದೆ. ರಾಜ್ಯ ಸರ್ಕಾರ ತಕ್ಷಣವೇ ಪಠ್ಯಪುಸ್ತಕ ದರವನ್ನು ಕಡಿಮೆ ಮಾಡಬೇಕೆಂದು ಒತ್ತಾಯಿಸಿದರು. 

 ಜೊತೆಗೆ ಕಲ್ಯಾಣ ಕರ್ನಾಟಕ ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಕೆಲವು ಶಿಕ್ಷಕರು ಅಕ್ರಮವಾಗಿ ಟ್ಯುಟೋರಿಯಲ್ ಗಳನ್ನು ತೆರೆದಿದ್ದು, ಶಾಲಾ ಮಕ್ಕಳಿಗೆ ಪಾಠ ಪ್ರವಚನ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರವು ಇಂತಹ ಟುಟೋರಿಯಲ್ ನಡೆಸುವ ಶಿಕ್ಷಕರ ವಿರುದ್ಧ ಕಠಿಣಕ್ರಮ ಕೈಗೊಳ್ಳಬೇಕೆಂದು ಒತಾಯಿಸಿದರು.