ಜುಲೈ 3, 2024

Sponsored

महावीर कुल्फी सेन्टर - बूंदी

महावीर कुल्फी सेन्टर की और से बूंदी वासियों को दीपावली की हार्दिक बधाई व शुभकामनाएं

   ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಇಂದು "ವಿಶ್ವ ಪರಿಸರ ದಿನಾಚರಣೆ" ಕಾರ್ಯಕ್ರಮ ನಡೆಯಿತು. 

  ಈ ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು "ಭೂ ಪರಿವರ್ತನೆ ಮತ್ತು ಒಣಭೂಮಿ ನಿರ್ವಹಣೆ" ಕಾರ್ಯಕ್ರಮ ಉದ್ಘಾಟಿಸಿ, ರಾಜ್ಯ ಪರಿಸರ ಪ್ರಶಸ್ತಿ ಪ್ರದಾನ ಮಾಡಿದರು. 

ಈ ವೇಳೆಯಲ್ಲಿ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಈಶ್ವರ್ ಬಿ. ಖಂಡ್ರೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾದ ಮರಿಗೌಡ, ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎನ್.‌ ಮಂಜುನಾಥ ಪ್ರಸಾದ್‌, ಇಲಾಖೆಯ ಹಿರಿಯ ಅಧಿಕಾರಿಗಳು, ಪರಿಸರ ಕಾರ್ಯಕರ್ತರು ಉಪಸ್ಥಿತರಿದ್ದರು.