ಜುಲೈ 18, 2024
ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು 'ಬಿಎಂಟಿಸಿ ಮಜ್ದೂರ್ ಸಂಘ ಬೆಂಗಳೂರು' ಹಾಗೂ 'ಕರ್ನಾಟಕ ರಸ್ತೆ ಸಾರಿಗೆ ಮಜ್ದೂರ್ ಸಂಘ ಒಕ್ಕೂಟ ಕರ್ನಾಟಕ' ಸದಸ್ಯರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.
ಈ ಪತ್ರಿಕಾಗೋಷ್ಠಿಯಲ್ಲಿ ಅಧ್ಯಕ್ಷರಾದ ಮಾದಯ್ಯ ಅವರು ಮಾತನಾಡಿದರು.
ರಾಜ್ಯದಲ್ಲಿ ಲಕ್ಷಾಂತರ ಸಾರಿಗೆ ಕಾರ್ಮಿಕರು ಹಾಗೂ ನಿವೃತ್ತ ನೌಕರರು ಸಂಕಷ್ಟದಲ್ಲಿ ಇದ್ದಾರೆ. ಹಾಗಾಗಿ ಸಿಎಂ ಸಿದ್ದರಾಮಯ್ಯ ಅವರು ಸಾರಿಗೆ ಸಿಬ್ಬಂದಿಯ ವೇತನ ಪರಿಷ್ಕರಣಿಯ ವಿಷಯದಲ್ಲಿ ಮತ್ತು ನಿವೃತ್ತಿಯಾದ ನೌಕರರಿಗೆ ಉಪಧನ ಹಾಗೂ ಹಿಂಬಾಕಿ ಪಾವತಿ ಮಾಡಬೇಕೆಂದು ಮಾದಯ್ಯ ಅವರು ಒತ್ತಾಯಿಸಿದರು.