ಜುಲೈ 19, 2024
ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು 'ಕರ್ನಾಟಕ ರಾಜ್ಯದ ಬಂಜಾರ (ಲಂಬಾಣಿ ) ಜಾಗೃತಿ ದಳ'ದ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.
ಪತ್ರಿಕಾಗೋಷ್ಠಿಯಲ್ಲಿ ಪದಾಧಿಕಾರಿ ವಿಠ್ಠಲ ನಾಯಕ ಅವರು ಮಾತನಾಡಿದರು.
ರಾಜ್ಯದ ಸರ್ಕಾರವು 'ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ'ದಲ್ಲಿ ನಡೆದಿರುವ ಭ್ರಷ್ಟಾಚಾರವನ್ನು ತನಿಖೆ ಮಾಡಿ ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವಿಠ್ಠಲ ನಾಯಕ ಅವರು ಒತ್ತಾಯಿಸಿದರು.
ಕರ್ನಾಟಕ ತಾಂಡ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಶಿವಶಂಕರನಾಯ್ಕ ಅವರು ಸೇರಿದಂತೆ ಮತ್ತಿತರ ಅಧಿಕಾರಿಗಳು ಭ್ರಷ್ಟಾಚಾರ ಎಸಗಿದ್ದಾರೆ ಎಂದು ವಿಠ್ಠಲ ನಾಯಕ ಅವರು ಆರೋಪಿಸಿದರು. ಭ್ರಷ್ಟಾಚಾರ ಎಸಿಗಿದವರ ವಿರುದ್ಧ ರಾಜ್ಯ ಸರ್ಕಾರ ಸೂಕ್ತವಾದಂತ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವಿಠ್ಠಲ ನಾಯಕ ಅವರು ಒತ್ತಾಯಿಸಿದರು.