ಜುಲೈ 20, 2024

Sponsored

कृष्णा हाइट्स - कोटा

कृष्णा हाइट्स की ओर सभी कोटा एवं बूंदी वासियों को नवरात्री, दशहरा तथा दीपावली की हार्दिक शुभकामनायें |

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು ' ಕನ್ನಡ ಒಕ್ಕೂಟ - ಕರ್ನಾಟಕ ರಾಜ್ಯ' ಪದಾಧಿಕಾರಿಗಳು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು. 

 ಈ ಪತ್ರಿಕಾಗೋಷ್ಠಿಯಲ್ಲಿ ಅಧ್ಯಕ್ಷರಾದ ವಾಟಾಳ್ ನಾಗರಾಜ್ ಅವರು ಮಾತನಾಡಿದರು. 

 ರಾಜ್ಯ ಸರ್ಕಾರವು ಅಧಿವೇಶನದಲ್ಲಿ ಕನ್ನಡಿಗರಿಗೆ ಉದ್ಯೋಗದ ಮೀಸಲಾತಿ ಹೆಚ್ಚಳದ ಕನ್ನಡಿಗರಿಗೆ ಉದ್ಯೋಗ ಮಸೂದೆಯನ್ನು ಮಂಡಿಸಲೇಬೇಕು ಎಂದು ವಾಟಾಳ್ ನಾಗರಾಜ್ ಅವರು ಮಾಧ್ಯಮಗಳಿಗೆ ತಿಳಿಸಿದರು.

 ಕನ್ನಡದ ನೆಲದಲ್ಲಿ ಅನೇಕ ಕೈಗಾರಿಕೆಗಳು ಹಾಗೂ ಉದ್ಯಮಗಳು ಸ್ಥಾಪನೆಯಾಗಿವೆ. ಕನ್ನಡಿಗರು ಉದಾರ ಮನಸ್ಸಿನ ರಾಜ್ಯದವರಾಗಿದ್ದು, ವಿವಿಧ ಕೈಗಾರಿಕೆಗಳಿಗೆ ನೆಲ ಹಾಗೂ ಜಲವನ್ನು ನೀಡಿದ್ದಾರೆ. ಹಾಗಾಗಿ ಕರ್ನಾಟಕದಲ್ಲಿ ಆರಂಭವಾಗಿರುವ ಖಾಸಗಿ ಕಂಪನಿಗಳು, ಕೈಗಾರಿಕೆಗಳು, ಉದ್ಯಮಗಳ ಮಾಲೀಕರು ಕನ್ನಡಿಗರಿಗೆ ಉದ್ಯೋಗ ನೀಡಲೇಬೇಕು ಎಂದು ವಾಟಾಳ್ ನಾಗರಾಜ್ ಅವರು ಒತ್ತಾಯಿಸಿದರು. 

 ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಅನ್ಯ ರಾಜ್ಯಗಳ ಉದ್ಯಮಿಗಳ ಮಾತಿಗೆ ಮಣಿಯಬಾರದು. ಇದೇ ಅಧಿವೇಶನದಲ್ಲಿ ಕನ್ನಡಿಗರಿಗೆ ಉದ್ಯೋಗ ಮಸೂದೆಯನ್ನು ಮಂಡಿಸಲೇಬೇಕು ಎಂದು ವಾಟಾಳ್ ನಾಗರಾಜ್ ಅವರು ಒತ್ತಾಯಿಸಿದರು. ಇಲ್ಲವಾದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಉಗ್ರವಾದ ಪ್ರತಿಭಟನೆ ಮಾಡಲಾಗುವುದು ಎಂದು ವಾಟಾಳ್ ನಾಗರಾಜ್ ಅವರು ಮಾಧ್ಯಮಗಳಿಗೆ ತಿಳಿಸಿದರು. 

 ಜೊತೆಗೆಕನ್ನಡ ಹಾಗೂ ಕನ್ನಡಿಗರ ವಿರುದ್ಧ ಮಾತನಾಡುವ ವ್ಯಕ್ತಿಗಳ ವಿರುದ್ಧ ಮುಖ್ಯ ಪ್ರತಿಭಟನೆ ಮಾಡಲಾಗುವುದು ಎಂದು ವಾಟಾಳ್ ನಾಗರಾಜ್ ಅವರು ತಿಳಿಸಿದರು. 

 ಪತ್ರಿಕಾಗೋಷ್ಠಿಯಲ್ಲಿ ಕನ್ನಡಪರ ಹೋರಾಟಗಾರರಾದ ಎಚ್. ವಿ. ಗಿರೀಶ್ ಗೌಡ, ಶಿವರಾಮೇಗೌಡ, ಮಂಜುನಾಥ್ ದೇವ್, ಕೆ.ಆರ್. ಕುಮಾರ್, ಪಾರ್ಥಸಾರಥಿ ಸೇರಿದಂತೆ ಇನ್ನಿತರೆ ಕನ್ನಡಪರ ಹೋರಾಟಗಾರರು ಉಪಸ್ಥಿತರಿದ್ದರು.