ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ' ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘಟನೆಗಳ ಸಂಯುಕ್ತ ಸಂಘರ್ಷ ಸಮಿತಿ'ಯ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.
ಈ ಪತ್ರಿಕಾಗೋಷ್ಠಿಯಲ್ಲಿ ಕಾರ್ಮಿಕ ಮುಖಂಡರಾದ ಜಿ.ಆರ್. ಶಿವಶಂಕರ್ ಅವರು ಮಾತನಾಡಿದರು.
ರಾಜ್ಯ ಸರ್ಕಾರ 01-04-2023 ರಿಂದ ಅನ್ವಯವಾಗುವಂತೆ ಗ್ರಾಚುಟಿ (ಉಪಧನ) ಬಗ್ಗೆ ಮಾಡಿರುವ ಆದೇಶವನ್ನು ಕೂಡ ನೀವು ವಾಪಸ್ ಪಡೆಯಬೇಕೆಂದು ಜಿ.ಆರ್. ಶಿವಶಂಕರ್ ಅವರು ಒತ್ತಾಯಿಸಿದರು. ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ನಿವೃತ್ತಿಯಾದ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಸಹಾಯಕಿಯರಿಗೆ ಗ್ರಾಚುಟಿ (ಉಪಧನ) ನೀಡಬೇಕೆಂದು ಒತ್ತಾಯಿಸಿದರು.
ಈ ಪತ್ರಿಕಾಗೋಷ್ಠಿಯಲ್ಲಿ ಅಧ್ಯಕ್ಷರಾದ ಜಯಮ್ಮ ಅವರು ಮಾತನಾಡಿದರು. ರಾಜ್ಯ ಸರ್ಕಾರವು ಅಂಗನವಾಡಿ ಕೇಂದ್ರಗಳಲ್ಲಿ ಎಲ್ಕೆಜಿ, ಯುಕೆಜಿ ಶಿಕ್ಷಣ ನೀಡಲು ನಿರ್ಧರಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ ಅಂಗನವಾಡಿ ಕೇಂದ್ರಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಯಕರ್ತರಿಗೆ ತರಬೇತಿ ನೀಡಬೇಕು, ಜೊತೆಗೆ ಅಂಗನವಾಡಿ ಕೇಂದ್ರಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿದರು.
ಈ ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಪ್ರಮುಖರಾದ ಪ್ರೇಮ ಹಾಗೂ ಸಿ. ಶಿವಣ್ಣ ಅವರು ಉಪಸ್ಥಿತರಿದ್ದರು.