ಜುಲೈ 25, 2024 

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಶಾಂತಿನಗರ ಮೂಲದ ಮಹಮ್ಮದ್ ಆಲಿ ಅವರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು. 

 ಶಾಂತಿನಗರದಲ್ಲಿ ಬಿಬಿಎಂಪಿಯಿಂದ ಅನುಮತಿ ಪಡೆಯದೆ ಅಕ್ರಮವಾಗಿ ಕಟ್ಟಡ ನಿರ್ಮಿಸಿ, ಪಿಜಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು. 

 ಈ ಬಗ್ಗೆ ಬಿಬಿಎಂಪಿಯ ಅಧಿಕಾರಿಗಳು ಕಟ್ಟಡವನ್ನು ತೆರವುಗೊಳಿಸುವುದಾಗಿ ಮಾಹಿತಿ ನೀಡಿದ್ದರು. ಆದರೆ ಇದುವರೆಗೆ ಅಕ್ರಮ ಕಟ್ಟಡವನ್ನು ತೆರವು ಮಾಡಿರುವುದಿಲ್ಲ ಎಂದು ಮೊಹಮ್ಮದ್ ಆಲಿ ಅವರು ಆರೋಪಿಸಿದರು.

 ಹಾಗಾಗಿ ಬಿಬಿಎಂಪಿ ಅಧಿಕಾರಿಗಳು ಶಾಂತಿನಗರದಲ್ಲಿನ ಅಕ್ರಮವಾಗಿ ನಿರ್ಮಿಸಿರುವ ಕಟ್ಟಡವನ್ನು ತೆರವುಗೊಳಿಸಬೇಕೆಂದು ಮಹಮ್ಮದ್ ಆಲಿ ಅವರು ಒತ್ತಾಯಿಸಿದರು.