ಜುಲೈ 25, 2024
ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ 'ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ NHM ಒಳಗುತ್ತಿಗೆ ನೌಕರರ ಸಂಘ'ದ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.
ಈ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿಯಾದ ಶಾವುರಾಜ್ ಸಂಗಣ್ಣ ಅವರು ಮಾತನಾಡಿದರು.
ರಾಜ್ಯ ಸರ್ಕಾರವು NHM ಒಳಗುತ್ತಿಗೆ ನೌಕರರನ್ನು ಖಾಯಂ ಮಾಡಬೇಕೆಂದು ಶಾವುರಾಜ್ ಸಂಗಣ್ಣ ಅವರು ಒತ್ತಾಯಿಸಿದರು.
ರಾಜ್ಯದಲ್ಲಿ 28 ಸಾವಿರ NHM ಒಳಗುತ್ತಿಗೆ ನೌಕರರಿದ್ದು, ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ದುಡಿಯುತ್ತಿದ್ದಾರೆ.
ಹಾಗಾಗಿ ಮಣಿಪುರ ರಾಜ್ಯದಲ್ಲಿ NHM ನೌಕರರನ್ನು ಖಾಯಂ ಮಾಡಿದಂತೆ ಕರ್ನಾಟಕ ರಾಜ್ಯದಲ್ಲಿಯೂ NHM ಒಳಗುತ್ತಿಗೆ ನೌಕರರನ್ನು ಖಾಯಂ ಮಾಡಬೇಕೆಂದು ಶಾವುರಾಜ್ ಸಂಗಣ್ಣ ಅವರು ಒತ್ತಾಯಿಸಿದರು.