ಆಗಸ್ಟ್ 2, 2024
ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು 'ರಾಷ್ಟ್ರೀಯ ಮೂಲ ನಿವಾಸಿ ಮಂಚ್'ನ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.
ಪತ್ರಿಕಾಗೋಷ್ಠಿಯಲ್ಲಿ ಅಧ್ಯಕ್ಷರಾದ ಮುತ್ತುರಾಜ್ ಅವರು ಮಾತನಾಡಿದರು
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದಲ್ಲಿ ತೀರಾ ಹಿಂದುಳಿದ ಉಪ ವರ್ಗಗಳಿಗೆ ಒಳ ಮೀಸಲಾತಿ ಕಲ್ಪಿಸುವ ಅಧಿಕಾರ ರಾಜ್ಯಗಳಿಗೆ ಇದೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ಹಿನ್ನೆಲೆಯಲ್ಲಿ ಮಹತ್ವದ ತೀರ್ಪು ನೀಡಿದ ನ್ಯಾಯಾಧೀಶರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು. ಹಾಗೆಯೇ ಸಿಎಂ ಸಿದ್ದರಾಮಯ್ಯ ಅವರು ಆದಷ್ಟು ಬೇಗ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ತೀರಾ ಹಿಂದುಳಿದ ವರ್ಗಗಳಿಗೆ ಒಳ ಮೀಸಲಾತಿ ಕಲ್ಪಿಸಬೇಕೆಂದು ಮುತ್ತುರಾಜ್ ಅವರು ಒತ್ತಾಯಿಸಿದರು.