ಆಗಸ್ಟ್ 8, 2024
ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು 'ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ' ಸದಸ್ಯರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.
ಈ ಪತ್ರಿಕಾಗೋಷ್ಠಿಯಲ್ಲಿ ಅಧ್ಯಕ್ಷರಾದ ಎಂ.ಸಿ. ವೇಣುಗೋಪಾಲ್ ಅವರು ಮಾತನಾಡಿದರು.
ಸಿಎಂ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸಲು ವಿಪಕ್ಷಗಳು ಮೂಡಾ ಹಗರಣವನ್ನು ಸೃಷ್ಟಿಸಿವೆ ಎಂದು ಎಂ.ಸಿ ವೇಣುಗೋಪಾಲ್ ಅವರು ಅಭಿಪ್ರಾಯಪಟ್ಟರು.
ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಬೆಂಬಲಿಸುವ ಸಲುವಾಗಿ ಮೈಸೂರಿನಲ್ಲಿ ಆಗಸ್ಟ್ 9ರಂದು ಮಹಾ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಎಂ.ಸಿ. ವೇಣುಗೋಪಾಲ್ ಅವರು ಮಾಧ್ಯಮಗಳಿಗೆ ತಿಳಿಸಿದರು.
ಈ ಸಮಾವೇಶದಲ್ಲಿ ಹಿಂದುಳಿದ ವರ್ಗಗಳ 5 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ ಎಂದು ಎಂ.ಸಿ. ವೇಣುಗೋಪಾಲ್ ಅವರು ತಿಳಿಸಿದರು.