ಆಗಸ್ಟ್ 10, 2024

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು ' ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಲಮೀಸಲಾತಿ ಜಾರಿ ಹೋರಾಟ ಸಮಿತಿ'ಯ ಸದಸ್ಯರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು. 

ಈ ಪತ್ರಿಕಾಗೋಷ್ಠಿಯಲ್ಲಿ ವಿಶ್ವ ಆದಿಜಾಂಬವ ಮಹಾಸಭಾದ ರಾಜ್ಯಾಧ್ಯಕ್ಷರಾದ ಡಾ. ಭೀಮರಾಜು ಅವರು ಮಾತನಾಡಿದರು. 

 ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದಲ್ಲಿ ತೀರಾ ಹಿಂದುಳಿದ ಉಪ ವರ್ಗಗಳಿಗೆ ಒಳ ಮೀಸಲಾತಿ ಕಲ್ಪಿಸುವ ಅಧಿಕಾರ ರಾಜ್ಯಗಳಿಗೆ ಇದೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ಹಿನ್ನೆಲೆಯಲ್ಲಿ ಮಹತ್ವದ ತೀರ್ಪು ನೀಡಿದ ನ್ಯಾಯಾಧೀಶರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು. ಹಾಗೆಯೇ ಸಿಎಂ ಸಿದ್ದರಾಮಯ್ಯ ಅವರು ಆದಷ್ಟು ಬೇಗ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ತೀರಾ ಹಿಂದುಳಿದ ವರ್ಗಗಳಿಗೆ ಒಳ ಮೀಸಲಾತಿ ಕಲ್ಪಿಸಬೇಕೆಂದು ಡಾ. ಭೀಮರಾಜು ಅವರು ಒತ್ತಾಯಿಸಿದರು.