ಆಗಸ್ಟ್ 10, 2024

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು ' ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ'ಯ ಸದಸ್ಯರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು. 

ಈ ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಸಂಚಾಲಕರಾದ ಬಿ. ಕೆ. ಕೇಶವಮೂರ್ತಿ ಅವರು ಮಾತನಾಡಿದರು. 

 ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದಲ್ಲಿ ತೀರಾ ಹಿಂದುಳಿದ ಉಪ ವರ್ಗಗಳಿಗೆ ಒಳ ಮೀಸಲಾತಿ ಕಲ್ಪಿಸುವ ಅಧಿಕಾರ ರಾಜ್ಯಗಳಿಗೆ ಇದೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ಹಿನ್ನೆಲೆಯಲ್ಲಿ ಮಹತ್ವದ ತೀರ್ಪು ನೀಡಿದ ನ್ಯಾಯಾಧೀಶರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು. ಹಾಗೆಯೇ ಸಿಎಂ ಸಿದ್ದರಾಮಯ್ಯ ಅವರು ಆದಷ್ಟು ಬೇಗ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ತೀರಾ ಹಿಂದುಳಿದ ವರ್ಗಗಳಿಗೆ ಒಳ ಮೀಸಲಾತಿ ಕಲ್ಪಿಸಬೇಕೆಂದು ಬಿ.ಕೆ. ಕೇಶವಮೂರ್ತಿಅವರು ಒತ್ತಾಯಿಸಿದರು.

ಈ ಹಿನ್ನಲೆಯಲ್ಲಿ ಎಸ್.ಸಿ & ಎಸ್.ಟಿ ಸಮುದಾಯದವರಿಗೆ ಒಳಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಆಗಸ್ಟ್ 13ರಂದು ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಬಿ.ಕೆ. ಕೇಶವಮೂರ್ತಿ ಅವರು ತಿಳಿಸಿದರು.