ಆಗಸ್ಟ್ 13, 2024
ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು 'ಡಾ. ಅಂಬೇಡ್ಕರ್ ಪೀಪಲ್ಸ್ ಪಾರ್ಟಿ - ಕರ್ನಾಟಕ' ಪದಾಧಿಕಾರಿಗಳು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.
ಈ ಪತ್ರಿಕಾಗೋಷ್ಠಿಯಲ್ಲಿ ರಾಜ್ಯಧ್ಯಕ್ಷರಾದ ಮಾರುತಿರಾವ್ ಜಂಬಗಾ ಅವರು ಮಾತನಾಡಿದರು.
ಆಗಸ್ಟ್ 1ರಂದು ಸುಪ್ರೀಂಕೋರ್ಟ್ ಪರಿಶಿಷ್ಟ ಜಾತಿ ಮತ ಪರಿಶಿಷ್ಟ ಪಂಗಡದಲ್ಲಿ ತೀರ ಹಿಂದುಳಿದ ವರ್ಗದವರಿಗೆ ಒಳಮೀಸಲಾತಿಯನ್ನು ರಾಜ್ಯ ಸರ್ಕಾರ ನೀಡಬಹುದು ಎಂದು ತಿಳಿಸಿದೆ. ಇದರಿಂದಾಗಿ ಸಮಾಜದಲ್ಲಿ ಅಸಮಾನತೆ ಸೃಷ್ಟಿಯಾಗುತ್ತದೆ ಎಂದು ಮಾರುತಿರಾವ್ ಜಂಬಗಾ ಅವರು ಹೇಳಿದರು.
ಸುಪ್ರೀಂ ಕೋರ್ಟ್ ಈ ತೀರ್ಪಿನ ವಿರುದ್ಧ ಡಾ. ಅಂಬೇಡ್ಕರ್ ಪೀಪಲ್ಸ್ ಪಾರ್ಟಿಯ ಸದಸ್ಯರು ಮೇಲ್ಮನವಿ ಸಲ್ಲಿಸುತ್ತಾರೆ ಮಾರುತಿರಾವ್ ಜಂಬಗಾ ಅವರು ತಿಳಿಸಿದರು.