ಆಗಸ್ಟ್ 17, 2024

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು 'ವಿಸಿಎನ್ ಡಾಕ್ಟರ್ಸ್ ವೆಲ್ಫೇರ್ ಅಸೋಸಿಯೇಷನ್' ನ ಸದಸ್ಯರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು. 

   ಈ ಪತ್ರಿಕಾಗೋಷ್ಠಿಯಲ್ಲಿ ಅಧ್ಯಕ್ಷರಾದ ಡಾ. ಎಸ್. ರಾಜು ಅವರು ಮಾತನಾಡಿದರು. 

 ಕೊಲ್ಕತ್ತಾದ ಆಸ್ಪತ್ರೆಯೊಂದರಲ್ಲಿ ಟ್ರೈನಿ ವೈದ್ಯೆಯ ಮೇಲೆ ನಡೆದಿರುವ ಅತ್ಯಾಚಾರ ಮತ್ತು ಹತ್ಯೆಯನ್ನು ಡಾ. ಎಸ್. ರಾಜು ಅವರು ಕಟುವಾಗಿ ಖಂಡಿಸಿದರು. 

 ರಾಜ್ಯದಲ್ಲಿನ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರಿಗೆ ರಾಜ್ಯ ಸರ್ಕಾರ ಸೂಕ್ತ ರಕ್ಷಣೆ ನೀಡಬೇಕು ಎಂದು ಡಾ. ಎಸ್. ರಾಜು ಅವರು ಒತ್ತಾಯಿಸಿದರು.