ಆಗಸ್ಟ್ 19, 2024

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು 'ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಬಿ)' ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಡಾ. ಎನ್. ಮೂರ್ತಿ ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು. 

 ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ರಾಜಕೀಯ ಪ್ರೇರಿತ ಹಾಗೂ ಷಡ್ಯಂತರವಾಗಿದೆ ಎಂದು ಡಾ. ಎನ್. ಮೂರ್ತಿ ಅವರು ಆರೋಪಿಸಿದರು. 

 ಖಾಸಗಿ ವ್ಯಕ್ತಿಗಳು ಸಲ್ಲಿಸಿದ ದೂರನ್ನು ಪರಿಗಣಿಸಿ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ರಾಜಕೀಯ ಪ್ರೇರಿತ ಹಾಗೂ ಸಂವಿಧಾನ ವಿರೋಧಿ ನಡೆಯಾಗಿದೆ ಎಂದು ಡಾ. ಎನ್. ಮೂರ್ತಿ ಅವರು ಖಂಡಿಸಿದರು.