ಆಗಸ್ಟ್ 21, 2024

ಭಾರಿ ಮಳೆಯಿಂದ ಕೆರೆಯಂತಾದ ಹೆಬ್ಬಾಳದ ಭದ್ರಪ್ಪ ಬಡಾವಣೆಯ ಬಸ್ ನಿಲ್ದಾಣ

 ಭಾರಿ ಮಳೆಯಿಂದಾಗಿ ಬೆಂಗಳೂರಿನ ಹೆಬ್ಬಾಳ ಸುತ್ತಮುತ್ತಲ ಪ್ರದೇಶಗಳು ಜಲಾವೃತವಾಗಿವೆ. ಹೆಬ್ಬಾಳ ವ್ಯಾಪ್ತಿಯ ಭದ್ರಪ್ಪ ಲೇಔಟ್ನ ಬಸ್ ನಿಲ್ದಾಣ ಸಂಪೂರ್ಣವಾಗಿ ಜಲಾವೃತವಾಗಿದೆ. 

 ಈ ಬಗ್ಗೆ ಬಿಬಿಎಂಪಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರೂ ಸಹ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಸ್ಥಳೀಯರದ ಕೆ.ಪಿ ಭೀಮರಾಜ್ ಅವರು ಅಸಮಾಧಾನ ವ್ಯಕ್ತಪಡಿಸಿದರು. 

 ಭದ್ರಪ್ಪ ಲೇಔಟ್ ನ ಅನೇಕ ರಸ್ತೆಗಳು ಜಲಾವೃತವಾಗಿದ್ದು, ಬಿಬಿಎಂಪಿ ಅಧಿಕಾರಿಗಳು ನೀರನ್ನು ಹೊರಹಾಕಿಲ್ಲ. ಹಾಗಾಗಿ ಈ ಭಾಗದಲ್ಲಿ ಸಾಂಕ್ರಾಮಿಕ ರೋಗಗಳು ಬರುವ ಸಾಧ್ಯತೆ ಇದೆ ಎಂದು ಕೆ.ಪಿ. ಭೀಮರಾಜ್ ಅವರು ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.