ಆಗಸ್ಟ್ 23, 2024
ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು 'ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ., ಬೆಂಗಳೂರು ವತಿಯಿಂದ "ಡಿಪ್ಲೋಮಾ ಪ್ರಮಾಣ ಪತ್ರ ಪ್ರದಾನ ಸಮಾರಂಭ" ನಡೆಯಿತು.
ಈ ಸಮಾರಂಭವನ್ನು ಸಚಿವರಾದ ಹೆಚ್.ಕೆ. ಪಾಟೀಲ ಅವರು ಉದ್ಘಾಟಿಸಿದರು. ಈ ವೇಳೆ ಸಹಕಾರ ಸಂಬಂಧಗಳ ಬಗ್ಗೆ ಪುಸ್ತಕಗಳನ್ನು ಲೋಕಾರ್ಪಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಸಹಕಾರ ಕ್ಷೇತ್ರದಲ್ಲಿ ಸಾಧನೆ ಮಾಡಿದ ಪ್ರಮುಖ ಸಾಧಕರಿಗೆ ಸಹಕಾರ ರತ್ನ ಪ್ರಶಸ್ತಿ ನೀಡಲಾಯಿತು.