ಆಗಸ್ಟ್ 26, 2024
ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು ' ಕರ್ನಾಟಕ ಅಹಿಂದ ಸಂಘಟನೆಗಳ ಒಕ್ಕೂಟ'ದ ಸದಸ್ಯರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.
ರಾಜ್ಯದ ಕಾಂಗ್ರೆಸ್ ಸರ್ಕಾರ ದಲಿತರ ಹೆಸರಲ್ಲಿ ದಲಿತರಿಗೆ ಅನ್ಯಾಯ ಮಾಡುತ್ತಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯದವರಿಗೆ ಮೀಸಲಿಟ್ಟು ಹಣವನ್ನು ಬೇರೆ ಬೇರೆ ಯೋಜನೆಗಳಿಗೆ ಖರ್ಚು ಮಾಡುತ್ತಿದ್ದಾರೆ ಎಂದು ಸದಸ್ಯರು ಆರೋಪಿಸಿದರು.
ಹಾಗಾಗಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ತೊಲಗಬೇಕು ಎಂದು ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.
ಈ ಹಿನ್ನಲೆಯಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಆಗಸ್ಟ್ 28ರಂದು "ಕಾಂಗ್ರೆಸ್ ಹಠಾವೋ, ದಲಿತ್ ಬಚಾವೋ" ಪ್ರತಿಭಟನಾ ಸಮಾವೇಶವನ್ನು ಹಮ್ಮಿಕೊಂಡಿರುವುದಾಗಿ ಮಾಧ್ಯಮಗಳಿಗೆ ತಿಳಿಸಿದರು.