ಆಗಸ್ಟ್ 26, 2024
ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು 'ದಲಿತ ಸಂಘರ್ಷ ಸಮಿತಿ'ಯ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.
ಈ ಪತ್ರಿಕಾಗೋಷ್ಠಿಯಲ್ಲಿ ದಲಿತ ಸಂಘರ್ಷ ಸಮಿತಿಯ ಹಿರಿಯರ ಮುಖಂಡರಾದ ಇಂದೂಧರ ಹೊನ್ನಾಪುರ ಅವರು ಮಾತನಾಡಿದರು.
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ರಾಜಕೀಯ ಪ್ರೇರಿತ ಹಾಗೂ ಷಡ್ಯಂತ್ರವಾಗಿದೆ ಎಂದು ಇಂದೂಧರ ಹೊನ್ನಾಪುರ ಅವರು ಆರೋಪಿಸಿದರು.
ಖಾಸಗಿ ವ್ಯಕ್ತಿಗಳು ಸಲ್ಲಿಸಿದ ದೂರನ್ನು ಪರಿಗಣಿಸಿ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ರಾಜಕೀಯ ಪ್ರೇರಿತ ಹಾಗೂ ಸಂವಿಧಾನ ವಿರೋಧಿ ನಡೆಯಾಗಿದೆ ಎಂದು ಇಂದೂಧರ ಹೊನ್ನಾಪುರ ಅವರು ಖಂಡಿಸಿದರು.
ಈ ಹಿನ್ನೆಲೆಯಲ್ಲಿ ಬೆಂಗಳೂರು ಫ್ರೀಡಂ ಪಾರ್ಕ್ ನಲ್ಲಿ ಸೆಪ್ಟೆಂಬರ್ 3ರಂದು ರಾಜ್ಯಪಾಲರ ವಿರುದ್ಧ ದಲಿತ ಸಂಘರ್ಷ ಸಮಿತಿಯ ಸದಸ್ಯರು ಪ್ರತಿಭಟನೆ ನಡೆಸಲಿದ್ದಾರೆ.