ಆಗಸ್ಟ್ 28, 2024
ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು 'ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ವಕೀಲರ ಸಂಘ - ಬೆಂಗಳೂರು' ಸದಸ್ಯರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.
ಈ ಪತ್ರಿಕಾಗೋಷ್ಠಿಯಲ್ಲಿ ಅಧ್ಯಕ್ಷರಾದ ಸುರೇಶ್ ಎಂ. ಲಾತೂರ್ ಅವರು ಮಾತನಾಡಿದರು.
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ರಾಜಕೀಯ ಪ್ರೇರಿತ ಹಾಗೂ ಷಡ್ಯಂತ್ರವಾಗಿದೆ ಎಂದು ಸುರೇಶ್ ಎಂ. ಲಾತೂರ್ ಅವರು ಆರೋಪಿಸಿದರು.
ಖಾಸಗಿ ವ್ಯಕ್ತಿಗಳು ಸಲ್ಲಿಸಿದ ದೂರನ್ನು ಪರಿಗಣಿಸಿ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ರಾಜಕೀಯ ಪ್ರೇರಿತ ಹಾಗೂ ಸಂವಿಧಾನ ವಿರೋಧಿ ನಡೆಯಾಗಿದೆ ಎಂದು ಸುರೇಶ್ ಎಂ. ಲಾತೂರ್ ಅವರು ಖಂಡಿಸಿದರು.