ಆಗಸ್ಟ್ 29, 2024 

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು 'UIBFF' ಸದಸ್ಯರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು. 

  ಈ ಪತ್ರಿಕಾಗೋಷ್ಠಿಯಲ್ಲಿ ಬಾಡಿ ಬಿಲ್ಡರ್ ಆದ ಸಿದ್ದು ಅವರು ಮಾತನಾಡಿದರು. 

  ಬೆಂಗಳೂರಿನ ಅರಮನೆ ಮೈದಾನದಲ್ಲಿ ನವೆಂಬರ್ 22 & 23 ರಂದು 'UIBFF' ಮಿಸ್ಟರ್ ಅಂಡ್ ಮಿಸ್ ವರ್ಲ್ಡ್ ಬಾಡಿ ಬಿಲ್ಡಿಂಗ್ ಸ್ಪರ್ಧೆ ಆಯೋಜಿಸಲಾಗುತ್ತಿದೆ ಎಂದು ಸಿದ್ದು ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದರು. 

  ಈ ಸ್ಪರ್ಧೆಯಲ್ಲಿ ಸ್ತ್ರೀ ಮತ್ತು ಪುರುಷ ಎಲ್ಲಾ ವಿಭಾಗದ ಸ್ಪರ್ಧೆ ನಡೆಸಲಾಗುತ್ತದೆ. ಈ ಸ್ಪರ್ಧೆಯಲ್ಲಿ ವಿಜೇತರಾದವರಿಗೆ 15 ಲಕ್ಷ ರೂ ಬಹುಮಾನ ಪದಕ ಟ್ರೋಫಿ ಮತ್ತು ಪ್ರಮಾಣ ಪತ್ರವನ್ನು ನೀಡಲಾಗುತ್ತದೆ ಎಂದು ಸಿದ್ದು ಅವರು ಹೇಳಿದರು. 

 ಈ ಸ್ಪರ್ಧೆಯಲ್ಲಿ ವಿವಿಧ ದೇಶ ವಿದೇಶಗಳ ಬಾಡಿ ಬಿಲ್ಡಿಂಗ್ ಅಥ್ಲೆಟ್ ಗಳು ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.