ಆಗಸ್ಟ್ 30, 2024
ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು 'ಕರ್ನಾಟಕ ರಾಜ್ಯ ಹೋಟೆಲುಗಳ ಸಂಘ'ದ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಗಸ್ಟ್ 31ರಂದು ಕರ್ನಾಟಕ ರಾಜ್ಯ ಹೋಟೆಲುಗಳ ಸಂಘದ ವತಿಯಿಂದ "ಜಿಲ್ಲಾವಾರು ಸಂಘಗಳ ಸಂಘಟನಾ ಸಮ್ಮಿಲನ" ಸಮಾರಂಭ ನಡೆಯಲಿದೆ ಎಂದು ತಿಳಿಸಿದರು.
ಈ ಸಮಾರಂಭವನ್ನು ಸಚಿವರಾದ ಎಂ.ಬಿ ಪಾಟೀಲ್ ಅವರು ಉದ್ಘಾಟನೆ ಮಾಡಲಿದ್ದಾರೆ ಎಂದು ತಿಳಿಸಿದರು.
ಸಮಾರಂಭದ ಮುಖ್ಯ ಅತಿಥಿಗಳಾಗಿ ಸಚಿವರಾದ ರಾಮಲಿಂಗಾ ರೆಡ್ಡಿ ಹಾಗೂ ದಿನೇಶ್ ಗುಂಡೂರಾವ್ ಅವರು ಉಪಸ್ಥಿತರಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಸಮಾರಂಭದಲ್ಲಿ ಸುಮಾರು 4 ಸಾವಿರಕ್ಕೂ ಹೆಚ್ಚು ಜನ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.