ಆಗಸ್ಟ್ 30, 2024
ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು ಬಿಬಿಎಂಪಿಯ ಮಾಜಿ ವಿರೋಧ ಪಕ್ಷದ ನಾಯಕರಾದ ಪದ್ಮನಾಭ ರೆಡ್ಡಿ ಅವರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.
ರಾಜ್ಯ ಸರ್ಕಾರವು 'ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ' ಮಾಡಲು ಹೊರಟಿದೆ. ಈಗಾಗಲೇ ರಾಜ್ಯ ಸರ್ಕಾರವು ವಿಧಾನಸಭೆ ಮತ್ತು ವಿಧಾನ ಪರಿಷತ್ ನಲ್ಲಿ ಈ ಬಗ್ಗೆ ಬಿಲ್ ಮಂಡಿಸಲಾಗಿದೆ. ಸರ್ಕಾರದಿಂದ ಇದೊಂದು ಕಾನೂನು ಬಾಹಿರ ಚಟುವಟಿಕೆಯಾಗಿದೆ ಎಂದು ಪದ್ಮನಾಭ ರೆಡ್ಡಿ ಅವರುಹೇಳಿದರು.
'ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ' ರಚಿಸಲು ರಾಜ್ಯ ಸರ್ಕಾರಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಪದ್ಮನಾಭ ರೆಡ್ಡಿ ಅವರು ತಿಳಿಸಿದರು.
ಹಾಗಾಗಿ ರಾಜ್ಯ ಸರ್ಕಾರವು 'ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ' ಬಿಲ್ ವಾಪಸ್ ಪಡಿಬೇಕು ಎಂದು ಬಿಬಿಎಂಪಿಯ ಮಾಜಿ ವಿರೋಧ ಪಕ್ಷದ ನಾಯಕರಾದ ಪದ್ಮನಾಭ ರೆಡ್ಡಿ ಅವರು ಒತ್ತಾಯಿಸಿದರು.