ಸೆಪ್ಟೆಂಬರ್ 2, 2024

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ'ಯ ರಾಜ್ಯಾಧ್ಯಕ್ಷರಾದ ಡಾ|| ಎನ್. ಮೂರ್ತಿ ಅವರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು. 

  ಈ ಪತ್ರಿಕಾಗೋಷ್ಠಿಯಲ್ಲಿ ರಾಜ್ಯಾಧ್ಯಕ್ಷರಾದ ಡಾ|| ಎನ್. ಮೂರ್ತಿ ಅವರು ಮಾತನಾಡಿದರು. 

 ಸುಪ್ರೀಂ ಕೋರ್ಟ್ ತೀರ್ಪಿನಂತೆ ಪರಿಶಿಷ್ಟರ ಒಳ ಮೀಸಲಾತಿ ಅನುಷ್ಠಾನಕ್ಕೆ ಆಗ್ರಹಿಸಿ ರಾಜ್ಯದಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 9ರಂದು ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಡಾ|| ಎನ್. ಮೂರ್ತಿ ಅವರು ಮಾಧ್ಯಮಗಳಿಗೆ ತಿಳಿಸಿದರು. 

   ರಾಜ್ಯದಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದ್ದು, ಸೆಪ್ಟೆಂಬರ್ 9ರಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುತ್ತದೆ ಎಂದು ಡಾ|| ಎನ್. ಮೂರ್ತಿ ಅವರು ತಿಳಿಸಿದರು.