ಸೆಪ್ಟೆಂಬರ್ 2, 2024
ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು 'ಕರ್ನಾಟಕ ರಸ್ತೆ ಸಾರಿಗೆ ಮಜ್ದೂರ್ ಸಂಘ ಒಕ್ಕೂಟ'ದ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.
ಈ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿಯಾದ ಜಿ.ಎಸ್. ಮಹದೇವಯ್ಯ ಅವರು ಮಾತನಾಡಿದರು.
ರಾಜ್ಯದಲ್ಲಿರುವ ಕೆಎಸ್ಆರ್ಟಿಸಿ ಸಂಸ್ಥೆಯ ನೌಕರರು ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಆದರೆ ರಾಜ್ಯ ಸರ್ಕಾರ ಕೆಎಸ್ಆರ್ಟಿಸಿ ನೌಕರರ ಯಾವುದೇ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂದು ಜಿ.ಎಸ್. ಮಹದೇವಯ್ಯ ಅವರು ಅಸಮಾಧಾನ ವ್ಯಕ್ತಪಡಿಸಿದರು.
ಈ ಹಿನ್ನಲೆಯಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸೆಪ್ಟೆಂಬರ್ 4ರಂದು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕೆಎಸ್ಆರ್ಟಿಸಿ ಸಂಸ್ಥೆಯ ನೌಕರರು ಬೃಹತ್ ಪ್ರತಿಭಟನೆ ಮಾಡದಿದ್ದಾರೆ ಎಂದು ಜಿ.ಎಸ್. ಮಹದೇವಯ್ಯ ಅವರು ಮಾಧ್ಯಮಗಳಿಗೆ ತಿಳಿಸಿದರು.
ಈ ಪ್ರತಿಭಟನೆಯಲ್ಲಿ ಕೆಎಸ್ಆರ್ ಟಿಸಿ ಸಂಸ್ಥೆಯ ಸಾವಿರಾರು ನೌಕರರು ಭಾಗವಹಿಸಲಿದ್ದಾರೆ ಎಂದು ಜಿ.ಎಸ್. ಮಹದೇವಯ್ಯ ಅವರು ತಿಳಿಸಿದರು.