ಸೆಪ್ಟೆಂಬರ್ 9, 2024

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು 'ಬಿಡಿಎ ಕಾಂಪ್ಲೆಕ್ಸ್ ಉಳಿಸಿ ಹೋರಾಟ ಸಮಿತಿ'ಯ ಪದಾಧಿಕಾರಿಗಳ ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು. 

 ಈ ಪತ್ರಿಕಾಗೋಷ್ಠಿಯಲ್ಲಿ ಹೋರಾಟ ಸಮಿತಿಯ ಮುಖ್ಯಸ್ಥರಾದ ಆರ್. ನಾಗೇಶ್ ಅವರು ಮಾತನಾಡಿದರು. 

 ರಾಜ್ಯ ಸರ್ಕಾರವು ಬಿಡಿಎ ಕಾಂಪ್ಲೆಕ್ಸ್ ಗಳನ್ನು ಮರು ನಿರ್ಮಾಣ ಮಾಡಲು ಖಾಸಗಿ ಕಂಪನಿಗಳಿಗೆ ಗುತ್ತಿಗೆ ನೀಡಿದೆ. ಈ ಆದೇಶವನ್ನು ತಕ್ಷಣವೇ ರದ್ದು ಮಾಡಬೇಕೆಂದು ಆರ್. ನಾಗೇಶ್ ಅವರು ಒತ್ತಾಯಿಸಿದರು. 

 ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸೆಪ್ಟೆಂಬರ್ 12ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಆರ್ ನಾಗೇಶ್ ಅವರು ಮಾಧ್ಯಮಗಳಲ್ಲಿ ತಿಳಿಸಿದರು. 

 ಪತ್ರಿಕಾಗೋಷ್ಠಿಯಲ್ಲಿ ಬಹುಜನ ದಲಿತ ಸಂಘರ್ಷ ಸಮಿತಿ ಅಧ್ಯಕ್ಷರಾದ ಆರ್. ಎಂ. ಎನ್. ರಮೇಶ್, ಕರವೇ ಕಚೇರಿ ರಾಜ್ಯಾಧ್ಯಕ್ಷರಾದ ತಾಯ್ನಾಡು ರಾಘವೇಂದ್ರ, ಅಮ್ ಆದ್ಮಿ ಪಕ್ಷದ ಮುಖಂಡರಾದ ಅನಿಲ್ ನಾಚಪ್ಪ ಅವರು ಉಪಸ್ಥಿತರಿದ್ದರು.