ಅಕ್ಟೋಬರ್ 9, 2024
ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು ಬಿಬಿಎಂಪಿ ಆರೋಗ್ಯಾಧಿಕಾರಿಯಾದ ಡಾ. ಸವಿತಾ ಅವರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.
ಪತ್ರಿಕಾಗೋಷ್ಠಿಯಲ್ಲಿ ಡಾ. ಸವಿತಾ ಅವರು ಮಾತನಾಡಿದರು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಆರೋಗ್ಯ ವಿಭಾಗದಲ್ಲಿ 25 ವರ್ಷಗಳಿಂದ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಆದರೆ ಬಿಬಿಎಂಪಿಯಲ್ಲಿನ ಕೆಲವು ನೌಕರರು ನನ್ನ ತೇಜೊವಧೆಗೆ ಪ್ರಯತ್ನಿಸುತ್ತಿದ್ದಾರೆ ಎಂದು ಡಾ. ಸವಿತಾ ಅವರು ಆರೋಪಿಸಿದರು.
ಹಾಗಾಗಿ ಬಿಬಿಎಂಪಿ ಆಯುಕ್ತರು ನನಗೆ ಸೂಕ್ತ ರಕ್ಷಣೆ ನೀಡಬೇಕೆಂದು ಡಾ. ಸವಿತಾ ಅವರು ಮನವಿ ಮಾಡಿದರು.
 
  
  
  
   
  