ಅಕ್ಟೋಬರ್ 15, 2024
ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು 'ಕನ್ನಡ ಜಾಗೃತಿ ವೇದಿಕೆ'ಯ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.
ಈ ಪತ್ರಿಕಾಗೋಷ್ಠಿಯಲ್ಲಿ ರಾಜ್ಯದ್ಯಕ್ಷರಾದ ಮಂಜುನಾಥ ದೇವ ಅವರು ಮಾತನಾಡಿದರು.
ಖಾಸಗಿ ಉದ್ಯಮಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿದರು.
ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅಕ್ಟೋಬರ್ 19ರಂದು ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದು ಮಂಜುನಾಥ ದೇವ ಅವರು ತಿಳಿಸಿದರು.
ಈ ಪ್ರತಿಭಟನೆಯಲ್ಲಿ ಸುಮಾರು 5 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಭಾಗಿಯಾಗಲಿದ್ದಾರೆ ಎಂದು ಮಂಜುನಾಥ ದೇವ ಅವರು ತಿಳಿಸಿದರು.