ಅಕ್ಟೋಬರ್ 18, 2024
ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು ' ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ, ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟ'ದ ಸದಸ್ಯರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.
ಈ ಪತ್ತೆಗಾಗೋಷ್ಠಿಯಲ್ಲಿ ಅಧ್ಯಕ್ಷರಾದ ಡಾ|| ಕೆ.ಇ. ರಾಧಾಕೃಷ್ಣ ಹಾಗೂ ಮುಖ್ಯ ಪ್ರಧಾನ ಕಾರ್ಯದರ್ಶಿಯಾದ ಡಾ|| ಕೆ.ಎಸ್.ಎನ್. ದೀಕ್ಷಿತ್ ಅವರು ಮಾತನಾಡಿದರು
ಬೆಂಗಳೂರಿನ ಟೌನ್ ಹಾಲ್ ನಲ್ಲಿ ಅಕ್ಟೋಬರ್ 21ರಂದು ||ಘಂಟಾನಾದ ಶೀರ್ಷಿಕೆ ಭಾಗ-2 || ರಾಜ್ಯಮಟ್ಟದ ಬೃಹತ್ ಸಮಾವೇಶ ನಡೆಯಲಿದೆ ಎಂದು ಡಾ|| ಕೆ.ಎಸ್.ಎನ್. ದೀಕ್ಷಿತ್ ಅವರು ತಿಳಿಸಿದರು.
ಈ ಸಮಾವೇಶವನ್ನು ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರು ಉದ್ಘಾಟನೆ ಮಾಡಲಿದ್ದಾರೆ ಎಂದು ತಿಳಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಮುಜರಾಯಿ ಖಾತೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ವಹಿಸಿದ್ದಾರೆ ಎಂದು ಡಾ|| ಕೆ.ಎಸ್.ಎನ್. ದೀಕ್ಷಿತ್ ಅವರು ತಿಳಿಸಿದರು.
ಈ ಸಮಾವೇಶದಲ್ಲಿ ರಾಜ್ಯದ ಸಾವಿರಾರು ಅರ್ಚಕರು ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.