ಅಕ್ಟೋಬರ್ 19, 2024
ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು 'ಕರ್ನಾಟಕ ಸಾಮಾಜಿಕ ನ್ಯಾಯಪರ ವಕೀಲರ ವೇದಿಕೆ' ಸದಸ್ಯರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.
ಈ ಪತ್ರಿಕಾಗೋಷ್ಠಿಯಲ್ಲಿ ಹಿರಿಯ ವಕೀಲರು ಹಾಗೂ ಅಧ್ಯಕ್ಷರಾದ ಎಸ್. ಅರುಣ್ ಕುಮಾರ್ ಅವರು ಮಾತನಾಡಿದರು.
ಗೌರವಾನ್ವಿತ ಸುಪ್ರೀಂಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಒಳ ಮೀಸಲಾತಿ ನೀಡಬೇಕೆಂದು ಎಸ್. ಅರುಣ್ ಕುಮಾರ್ ಅವರು ಒತ್ತಾಯಿಸಿದರು.