ಅಕ್ಟೋಬರ್ 22, 2024

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು 'ಕೆ.ಐ.ಎ.ಡಿ.ಬಿ ಭೂಸ್ವಾಧೀನ ವಿರುದ್ಧ ರೈತ ಹೋರಾಟ ಸಮಿತಿ' ಸದಸ್ಯರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು. 

ಕೆ.ಐ.ಎ.ಡಿ.ಬಿ ಅಧಿಕಾರಿಗಳು ದೊಡ್ಡಬಳ್ಳಾಪುರದ ವಿವಿಧ ಗ್ರಾಮಗಳ ರೈತರ ಜಮೀನನ್ನು ಸ್ವಾದೀನಪಡಿಸಿಕೊಂಡು ಹಣ ಬಿಡುಗಡೆ ಮಾಡದೆ ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಕೆ.ಐ.ಎ.ಡಿ.ಬಿ ಅಧಿಕಾರಿಗಳು ಸ್ವಾದೀನಪಡಿಸಿಕೊಂಡಿರುವ ಸುಮಾರು 900 ಎಕರೆಗೂ ಹೆಚ್ಚು ಜಮೀನಿಗೆ ಸೂಕ್ತ ಪರಿಹಾರದ ಹಣ ನೀಡಬೇಕೆಂದು ಒತ್ತಾಯಿಸಿದರು.