ಅಕ್ಟೋಬರ್ 22, 2024
ओम धगाल - पूर्व प्रदेश कार्यकारिणी सदस्य भाजपा युवा मोर्चा
ओम धगाल की और से हिंडोली विधानसभा क्षेत्र एवं बूंदी जिले वासियों को रौशनी के त्यौहार दीपावली की हार्दिक बधाई व शुभकामनाएं
ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು 'ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿ' ವತಿಯಿಂದ ಪತ್ರಿಕಾಗೋಷ್ಠಿ ನಡೆಯಿತು.
ಈ ಪತ್ರಿಕಾಗೋಷ್ಠಿಯಲ್ಲಿ ವಕೀಲರಾದ ಶ್ರೀಕಾಂತ್ ಅವರು ಮಾತನಾಡಿದರು.
ರಾಜ್ಯ ಸರ್ಕಾರದ ವತಿಯಿಂದ ಕಾರ್ಕಳದಲ್ಲಿ ಪರಶುರಾಮ ಥೀಮ್ ಪಾರ್ಕ್ ನಿರ್ಮಿಸಲಾಗಿತ್ತು. ಈ ಥೀಮ್ ಪಾರ್ಕ್ ನಲ್ಲಿ ಆಕರ್ಷಣೀಯ ಕೇಂದ್ರವಾಗಿದ್ದ ಪರಶುರಾಮ ವಿಗ್ರಹವನ್ನು ಅನಾವರಣಗೊಳಿಸಲಾಗಿತ್ತು. ₹1.25 ಕೋಟಿ ವೆಚ್ಚದಲ್ಲಿ ಪರಶುರಾಮ ಕಂಚಿನ ಪ್ರತಿಮೆಯನ್ನು ನಿರ್ಮಿಸಲಾಗಿತ್ತು. ಆದರೆ ಪರಶುರಾಮ ಪ್ರತಿಮೆ ಕಂಚಿನ ಪ್ರತಿಮೆಯಾಗಿರಲಿಲ್ಲ. ಹಿತ್ತಾಳೆ ಸೇರಿದಂತೆ ಬೇರೆ ಬೇರೆ ಲೋಹಗಳಿಂದ ಮಾಡಲ್ಪಟ್ಟಿತ್ತು. ಹಾಗಾಗಿ ಅನಾವರಣಗೊಂಡ ಕೇವಲ ಆರು ತಿಂಗಳಿಗೆ ಪ್ರತಿಮೆಯ ರೂಪವೇ ಬದಲಾಗಿ ಹೋಯಿತು. ಪರಶುರಾಮ ಪ್ರತಿಮೆ ನಿರ್ಮಾಣದಲ್ಲಿ ಅವ್ಯವಹಾರ ನಡೆದಿದೆ. ರಾಜ್ಯ ಸರ್ಕಾರದ ಕೆಲವು ಅಧಿಕಾರಿಗಳು ಹಾಗೂ ಕಂಟ್ರಾಕ್ಟರ್ ಭ್ರಷ್ಟಾಚಾರದಲ್ಲಿ ನೇರವಾಗಿ ಭಾಗಿಯಾಗಿದ್ದಾರೆ ಎಂದು ಶ್ರೀಕಾಂತ್ ಅವರು ಹೇಳಿದರು.
ಈ ಬಗ್ಗೆ ಹೈಕೋರ್ಟ್ ನಲ್ಲಿ ಪ್ರಕರಣ ದಾಖಲಾಗಿತ್ತು. ಮಾನ್ಯ ಹೈಕೋರ್ಟ್ ಕಾರ್ಕಳದ ಪರಶುರಾಮ ಪ್ರತಿಮೆಯ ನಿರ್ಮಾಣದಲ್ಲಿ ಅವ್ಯವಹಾರ ನಡೆದಿರುವುದರಿಂದ ಸಂಪೂರ್ಣ ತನಿಖೆಗೆ ಆದೇಶಿಸಿದೆ ಎಂದು ವಕೀಲರಾದ ಶ್ರೀಕಾಂತ್ ಅವರು ಮಧ್ಯಮಗಳಿಗೆ ತಿಳಿಸಿದರು.