ಅಕ್ಟೋಬರ್ 30, 2024
ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು ಫೆಡರೇಶನ್ ಆಫ್ ಕರ್ನಾಟಕ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್' ಸದಸ್ಯರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.
ಈ ಪತ್ರಿಕಾಗೋಷ್ಠಿಯಲ್ಲಿ ಅಧ್ಯಕ್ಷರಾದ ಡಾ. ರವೀಂದ್ರ ಶೆಟ್ಟಿ ಬಜಗೋಳಿ ಅವರು ಮಾತನಾಡಿದರು.
ರಾಜಧನ ಸಂಗ್ರಹಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿಲ್ಲ. ಹಾಗಾಗಿ ಕ್ರಷರ್ ಮತ್ತು ಕ್ವಾರಿ ಮಾಲೀಕರು ಮತ್ತು ಲಾರಿ ಮಾಲೀಕರು ಪ್ರತಿದಿನ ಕೋಟ್ಯಂತರ ರೂಪಾಯಿ ದಂಡ ಕಟ್ಟುತ್ತಿದ್ದಾರೆ. ಇದರಿಂದಾಗಿ ಕ್ವಾರಿ ಮತ್ತು ಕ್ರಷರ್ ಮಾಲೀಕರು ಮತ್ತು ಲಾರಿ ಮಾಲೀಕರು ಆತ್ಮಹತ್ಯೆ ಮಾಡಿಕೊಳ್ಳುವ ಪ್ರಕರಣಗಳು ನಡೆಯುತ್ತಿವೆ.
ಇತ್ತೀಚೆಗೆ ಲಾರಿ ಮಾಲೀಕರಾದ ನಾಗೇಶ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಾಗಾಗಿ ರಾಜ್ಯ ಸರ್ಕಾರ ನಾಗೇಶ್ ಅವರ ಕುಟುಂಬಕ್ಕೆ ಒಂದು ಕೋಟಿ ರೂಪಾಯಿ ನೀಡಬೇಕೆಂದು ಡಾ ||ರವೀಂದ್ರ ಶೆಟ್ಟಿ ಬಜೆಗೋಳಿಯವರು ಒತ್ತಾಯಿಸಿದರು.
ಕ್ರಷರ್ ಮತ್ತು ಕ್ವಾರಿ ಮಾಲೀಕರು ಮತ್ತು ಲಾರಿ ಮಾಲೀಕರ ವಿವಿಧ ಬೇಡಿಕೆಗಳನ್ನು ರಾಜ್ಯ ಸರ್ಕಾರ ಈ ಕೂಡಲೇ ಬಗೆಹರಿಸಬೇಕೆಂದು ಡಾ|| ರವೀಂದ್ರ ಶೆಟ್ಟಿ ಬಜೆಗೋಳಿ ಅವರು ಒತ್ತಾಯಿಸಿದರು.
ಒಂದು ವಾರದ ಒಳಗೆ ನಮ್ಮ ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸಿದಿದ್ದಲ್ಲಿ ಉಗ್ರವಾದ ಹೋರಾಟ ಮಾಡಲಾಗುವುದು ಎಂದು ಡಾ|| ರವೀಂದ್ರ ಶೆಟ್ಟಿ ಬಜಗೋಳಿ ಅವರು ತಿಳಿಸಿದರು.