ನವೆಂಬರ್ 1, 2024

ಜಾನಪದ ಕ್ಷೇತ್ರದಲ್ಲಿ ಖ್ಯಾತ ಗಾಯಕರಾದ ನರಸಿಂಹಲು ಅವರಿಗೆ "ಕನ್ನಡ ರಾಜ್ಯೋತ್ಸವ ಪ್ರಶಸ್ತಿ" ನೀಡಿ ಗೌರವಿಸಲಾಯಿತು.

ಜಾನಪದ ಕ್ಷೇತ್ರಕ್ಕೆ ನರಸಿಂಹಲು ಅವರ ಸಲ್ಲಿಸಿರುವ ಸಾಧನೆಯನ್ನು ಪರಿಗಣಿಸಿ ರಾಜ್ಯ ಸರ್ಕಾರವು ಪ್ರತಿಷ್ಠಿತ 'ಕನ್ನಡ ರಾಜ್ಯೋತ್ಸವ' ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದೆ. ನವಂಬರ್ 1 ರಂದು ವಿಧಾನಸೌಧ ಮುಂಭಾಗ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸರ್ಕಾರದ ವತಿಯಿಂದ ನರಸಿಂಹಲು ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. 

 ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ್ ತಂಗಡಗಿ ಅವರು ನರಸಿಂಹಲು ಅವರಿಗೆ 'ಕನ್ನಡ ರಾಜ್ಯೋತ್ಸವ ಪ್ರಶಸ್ತಿ' ನೀಡಿ ಗೌರವಿಸಿದರು.

 ಬೀದರ್ ಜಿಲ್ಲೆಯ ನರಸಿಂಹಲು ಅವರು ಖ್ಯಾತ ಜಾನಪದ ಗಾಯಕರಾಗಿದ್ದಾರೆ. ಸುಮಾರು 40 ವರ್ಷಗಳಿಂದ ಜಾನಪದ ಕ್ಷೇತ್ರದಲ್ಲಿ ಮಹತ್ವದ ಸಾಧನೆಯನ್ನು ಮಾಡಿದ್ದಾರೆ. ಕರ್ನಾಟಕ ಶಾಸ್ತ್ರೀಯ ಸಂಗೀತ, ಸುಗಮ ಸಂಗೀತದಲ್ಲಿ ಖ್ಯಾತ ಗಾಯಕರಾಗಿದ್ದಾರೆ. 

 ನರಸಿಂಹಲು ಅಪಾರ ಸಾಧನೆಗೆ ಹಲವು ಪ್ರಶಸ್ತಿಗಳು ಲಭಿಸಿವೆ.