ನವೆಂಬರ್ 12, 2024
ಬೆಂಗಳೂರಿನ ರಾಜರಾಜೇಶ್ವರಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಎ.ಸಿ.ಎಸ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ "14ನೇ ಗ್ರ್ಯಾಜುಯೇಷನ್ ಡೇ" ಸಮಾರಂಭವನ್ನು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಉದ್ಘಾಟಿಸಿದರು.
ರಾಜರಾಜೇಶ್ವರಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಸಂಸ್ಥಾಪಕ ಅಧ್ಯಕ್ಷರಾದ ಡಾ. ಎ.ಸಿ. ಷಣ್ಮುಗಂ ಅವರು ಈ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ರಾಜರಾಜೇಶ್ವರಿ ವೈದ್ಯಕೀಯ ಮಹಾವಿದ್ಯಾಲಯಲ್ಲಿ ವ್ಯಾಸಂಗ ಮಾಡಿದ 490 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.
ಈ ಸಮಾರಂಭದಲ್ಲಿ ವಿದ್ಯಾರ್ಥಿಗಳ ಪೋಷಕರು, ರಾಜರಾಜೇಶ್ವರಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಸಿಬ್ಬಂದಿ ಭಾಗಿಯಾಗಿದ್ದರು.