ನವೆಂಬರ್ 16, 2024 

ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ವತಿಯಿಂದ ಜಿಕೆವಿಕೆ ಆವರಣದಲ್ಲಿ "ಕೃಷಿ ಮೇಳ - 2024" ಆರಂಭವಾಗಿದೆ. 

  ನಾಲ್ಕು ದಿನಗಳ ಕಾಲ ನಡೆಯಲಿರುವ 'ಕೃಷಿ ಮೇಳ - 2024' ಕಾರ್ಯಕ್ರಮವನ್ನು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರು ಉದ್ಘಾಟಿಸಿದರು.

   ಈ ಸಂದರ್ಭದಲ್ಲಿ ಬೆಂಗಳೂರು ಕೃಷಿ ವಿವಿಯ ವ್ಯವಸ್ಥಾಪನಾ ಮಂಡಳಿಯ ಸದಸ್ಯರು ಹಾಗೂ ಶಾಸಕರಾದ ಶ್ರೀ ಶರತ್‌ ಬಚ್ಚೇಗೌಡ, ಶಾಸಕರಾದ ಶ್ರೀ ಎಸ್‌.ಆರ್‌. ವಿಶ್ವನಾಥ್‌, ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಡಾ.ಎಸ್.ವಿ. ಸುರೇಶ್‌ ಸೇರಿದಂತೆ ಇತರ ಪ್ರಮುಖರು ಉಪಸ್ಥಿತರಿದ್ದರು.

  ಇಂದಿನಿಂದ ಆರಂಭವಾದ ನಾಲ್ಕು ದಿನಗಳ ಕೃಷಿ ಮೇಳ ನಡೆಯಲಿದೆ. ಕೃಷಿ ಮೇಳದಲ್ಲಿ ಕೃಷಿ ಯಂತ್ರಗಳು, ನೂತನ ತಳಿಗಳ ಆವಿಷ್ಕಾರ ಹಾಗೂ ಆಧುನಿಕ ವ್ಯವಸಾಯ ಪದ್ಧತಿಗಳ ಬಗ್ಗೆ ತಿಳಿದುಕೊಳ್ಳಬಹುದು. 

ಈ ಬಾರಿ “ಹವಾಮಾನ ಚತುರ ಡಿಜಿಟಲ್ ಕೃಷಿ” ಎಂಬ ಘೋಷವಾಕ್ಯದೊಂದಿಗೆ ಈ ಬಾರಿ ಕೃಷಿ ಮೇಳವನ್ನು ಆಯೋಜಿಸಲಾಗಿದೆ. ಕೃಷಿ ಮೇಳದಲ್ಲಿ 700ಕ್ಕೂ ಹೆಚ್ಚು ಮಳಿಗೆಗಳಿವೆ. ಈ ಮಳಿಗೆಗಳಲ್ಲಿ ಕೃಷಿ, ಆಹಾರ, ದಾನ್ಯ, ಉಪಕರಣಗಳ ಬಗ್ಗೆ ಮಾಹಿತಿ ಸಿಗಲಿದೆ. ರೈತರು, ಕೃಷಿ ಆಸಕ್ತರು ಒಮ್ಮೆ ಕೃಷಿ ಮೇಳಕ್ಕೆ ಭೇಟಿ ನೀಡಿದರೆ ಕೃಷಿಗೆ ಸಂಬಂಧಿಸಿದಂತೆ ಹೆಚ್ಚು ಮಾಹಿತಿ ಸಿಗಲಿದೆ.