ನವೆಂಬರ್ 22, 2024

ಬೆಂಗಳೂರಿನ ಭಾಷಾಂತರ ನಿರ್ದೇಶನಾಲಯ ಕಛೇರಿಯಲ್ಲಿ ಇಂದು 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. 

 ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. 

 ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಜೈ ಶ್ರೀಧರವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. 

    ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಾಷಾಂತರ ನಿರ್ದೇಶನಾಲಯದ ಅಧ್ಯಕ್ಷರಾದ ಎಂ. ವೆಂಕಟೇಶ್ ಅವರು ವಹಿಸಿದ್ದರು.

 ಈ ಕಾರ್ಯಕ್ರಮದಲ್ಲಿ ಭಾಷಾಂತರ ನಿರ್ದೇಶನಾಲಯ ನೌಕರರ ಸಂಘದ ಸದಸ್ಯರು ಭಾಗಿಯಾಗಿದ್ದರು.