ನವೆಂಬರ್ 26, 2024
ಬೆಂಗಳೂರಿನ ಲಿಡ್ಕರ್ ಭವನದಲ್ಲಿ ಜೈಭೀಮ್ ಅಖಿಲ ಭಾರತ ದಲಿತ ಕ್ರಿಯಾ ಸಮಿತಿಯ 9ನೇ ವರ್ಷದ ವಾರ್ಷಿಕೋತ್ಸವ ಹಾಗೂ ಸಂವಿಧಾನ ಸನ್ಮಾನ ಅಭಿಯಾನ ಕನ್ನಡ ರಾಜ್ಯೋತ್ಸವ ಸಮಾರಂಭ ನಡೆಯಿತು.
ಈ ಸಮಾರಂಭವು ಜೈಭೀಮ್ ಅಖಿಲ ಭಾರತ ದಲಿತ ಕ್ರಿಯಾ ಸಮಿತಿಯ ರಾಷ್ಟ್ರೀಯ ಅಧ್ಯಕ್ಷರಾದ ಬಿ ಆರ್ ಮುನಿರಾಜು ಅವರ ನೇತೃತ್ವದಲ್ಲಿ ನಡೆಯಿತು.
ಈ ಸಮಾರಂಭದಲ್ಲಿ ಪ್ರಮುಖ ಅತಿಥಿಗಳಾಗಿ ನಿವೃತ್ತ ಐಆರ್ ಎಸ್ ಅಧಿಕಾರಿ ಭೀಮಶಂಕರ್, ಆದಿಜಾಂಬವ ಸಂಘದ ಸಿದ್ದರಾಜು, ಕ್ರಾಂತಿ ಪತ್ರಿಕೆಯ ಕ್ರಾಂತಿ ರಾಜು ಸೇರಿದಂತೆ ಅನೇಕ ಪ್ರಮುಖರು ಉಪಸ್ಥಿತರಿದ್ದರು.
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಿಗೆ ಒಳ ಮೀಸಲಾತಿ ನೀಡಬೇಕೆಂದು ಬಿ ಆರ್ ಮುನಿರಾಜು ಅವರು ಒತ್ತಾಯಿಸಿದರು.
ದಲಿತರಿಗೆ ಮೀಸಲಾದ ಅನುದಾನವನ್ನು ರಾಜ್ಯ ಸರ್ಕಾರವು ದಲಿತರ ಅಭಿವೃದ್ಧಿಗೆ ಬಳಕೆ ಮಾಡಬೇಕೆಂದು ಬಿ.ಆರ್. ಮುನಿರಾಜು ಅವರು ಸಮಾರಂಭದಲ್ಲಿ ಒತ್ತಾಯಿಸಿದರು.