ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ 'ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘ (RDPR)'ದ ಸದಸ್ಯರು ಪ್ರತಿಭಟನೆ ನಡೆಸಿದರು.
ರಾಜ್ಯ ಸರ್ಕಾರವು ಗ್ರಾಮ ಪಂಚಾಯತ್ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿದರು.
ರಾಜ್ಯಾಧ್ಯಕ್ಷರಾದ ಡಾಕ್ಟರ್ ದೇವಿಪ್ರಸಾದ್ ಬೋಳ್ಮ ಅವರ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಗ್ರಾಮ ಪಂಚಾಯಿತಿ ನೌಕರರು ಭಾಗವಹಿಸಿದ್ದರು.