ನವೆಂಬರ್ 27, 2024

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ 'ಕರ್ನಾಟಕ ಪ್ರದೇಶ ಕುರುಬರ ಸಂಘ'ದ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು. 

   ಈ ಪತ್ರಿಕಾಗೋಷ್ಠಿಯಲ್ಲಿ ಅಧ್ಯಕ್ಷರಾದ ಎಂ. ಈರಣ್ಣ ಅವರು ಮಾತನಾಡಿದರು. 

 ಬೆಂಗಳೂರಿನ ಮಲ್ಯ ಆಸ್ಪತ್ರೆ ಸಮೀಪದ ಶ್ರೀ ಸಂಪಿಗೆಹಳ್ಳಿ ಬೀರೇಶ್ವರ ದೇವಸ್ಥಾನದ ಆವರಣದಲ್ಲಿ ಡಿಸೆಂಬರ್ 1ರಂದು ಸರ್ವ ಸದಸ್ಯರ ಸಾಮಾನ್ಯ ಸಭೆ ಕರೆಯಲಾಗಿದೆ ಎಂದು ಎಂ. ಈರಣ್ಣ ಅವರು ಮಾಧ್ಯಮಗಳಿಗೆ ತಿಳಿಸಿದರು. 

 ಹಾಗಾಗಿ ಕರ್ನಾಟಕ ಪ್ರದೇಶ ಕುರುಬರ ಸಂಘದ ಎಲ್ಲಾ ಸದಸ್ಯರು 'ಸರ್ವ ಸದಸ್ಯರ ಸಾಮಾನ್ಯ ಸಭೆ'ಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದರು.