ನವೆಂಬರ್ 30, 2024
ಬೆಂಗಳೂರಿನ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದ ಮುಂದೆ "69ನೇ ಕನ್ನಡ ರಾಜ್ಯೋತ್ಸವ"ವನ್ನು ಸಂಭ್ರಮದಿಂದ ಆಚರಿಸಿದರು.
ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ಅನ್ನದಾನ ಮಾಡಲಾಯಿತು. ಸುರೇಂದ್ರ ಅವರ ನೇತೃತ್ವದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ಈ ವೇಳೆ 'ನಮ್ಮ ಮೆಟ್ರೋ ರೈಲು ನಿಗಮದ ಅಧಿಕಾರಿಗಳು, ಆಟೋ ಚಾಲಕರಾದ ವಿಜಯ್ ಕುಮಾರ್ ಸೇರಿದಂತೆ ಅನೇಕ ಆಟೋ ಚಾಲಕರು ಭಾಗಿಯಾಗಿದ್ದರು.