ಡಿಸೆಂಬರ್ 2, 2024
ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ 'ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ಮಟ್ಟದ ಮುಖ್ಯ ಪುಸ್ತಕ ಬರಹಗಾರರ (MBK) ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ (LCRP) ಸಖಿಯರ ಮಹಾ ಒಕ್ಕೂಟ'ದ ಸದಸ್ಯರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.
ಈ ಪತ್ರಿಕಾಗೋಷ್ಠಿಯಲ್ಲಿ ರಾಜ್ಯಾಧ್ಯಕ್ಷರಾದ ರುದ್ರಮ್ಮ ಅವರು ಮಾತನಾಡಿದರು.
ಗ್ರಾಮ ಪಂಚಾಯತಿ ಮಟ್ಟದ ಮುಖ್ಯ ಪುಸ್ತಕ ಬರಹಗಾರರ (MBK) ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ (LCRP) ಸಖಿಯರಿಗೆ ಸಮಾನ ವೇತನ ಹಾಗೂ ಸೂಕ್ತ ಪ್ರೋತ್ಸಾಹಧನ ನೀಡಬೇಕೆಂದು ರುದ್ರಮ್ಮ ಅವರು ಒತ್ತಾಯಿಸಿದರು.
ಈ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿಯಾದ ಕುಸುಮ ಅವರು ಉಪಸ್ಥಿತರಿದ್ದರು.