ಡಿಸೆಂಬರ್ 2, 2024

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ 'ಅಖಿಲ ಕರ್ನಾಟಕ ಮಾದಿಗ ಸಂಘಟನೆಗಳ ಒಕ್ಕೂಟ' ದ ಸದಸ್ಯರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು. 

  ಈ ಪತ್ರಿಕಾಗೋಷ್ಠಿಯಲ್ಲಿ ರಾಜ್ಯಾಧ್ಯಕ್ಷರಾದ ಎಂ. ಗುರುಮೂರ್ತಿ ಅವರು ಮಾತನಾಡಿದರು. ಬೆಂಗಳೂರಿನ ಹೇರೋಹಳ್ಳಿ ಗ್ರಾಮದಲ್ಲಿ ದಲಿತ ಕುಟುಂಬದ 4 ಎಕರೆ ಜಮೀನನ್ನು ಕಬಳಿಸಲು ಹುನ್ನಾರ ನಡೆಯುತ್ತಿದೆ ಎಂದು ಎಂ. ಗುರುಮೂರ್ತಿ ಅವರು ಆರೋಪಿಸಿದರು. 

ಭೂಮಾಫಿಯಾಗೆ ಸೇರಿದ ಕೆಲ ವ್ಯಕ್ತಿಗಳು ಕೋಟ್ಯಂತರ ರೂಪಾಯಿ ಬೆಲೆಬಾಳುವ ಜಮೀನನ್ನು ಕಬಳಿಸಲು ಯತ್ನಿಸುತ್ತಿದ್ದಾರೆ ಎಂದು ಎಂ. ಗುರುಮೂರ್ತಿ ಅವರು ಆರೋಪಿಸಿದರು. 

   ಜತೆಗೆ ಈ ವಿಷಯಕ್ಕೆ ಸಂಬಂಧಿಸಿದಂತೆ ಕೆಲವು ಕಿಡಿಗೇಡಿಗಳು ದಲಿತರ ಮೇಲೆ ದೌರ್ಜನ್ಯ ನಡೆಸಿದ್ದಾರೆ. ಈ ಸಂಬಂಧ ಸ್ಥಳೀಯ ಪೊಲೀಸ್ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೆ, ಕಿಡಿಗೇಡಿಗಳಿಗೆ ಬೆಂಬಲ ನೀಡುತ್ತಿದ್ದಾರೆ ಎಂದು ಎಂ. ಗುರುಮೂರ್ತಿ ಅವರು ಆರೋಪಿಸಿದರು.