ಡಿಸೆಂಬರ್ 6, 2024
ಬೆಂಗಳೂರಿನ ಸಚಿವಾಲಯ ಕ್ಲಬ್ ನಲ್ಲಿ 'ರಾಜ್ಯ ಸರ್ಕಾರಿ ಎಸ್ಸಿ/ಎಸ್ಟಿ ನೌಕರರ ಸಮನ್ವಯ ಸಮಿತಿ' ವತಿಯಿಂದ "ಡಾ. ಬಿ.ಆರ್. ಅಂಬೇಡ್ಕರ್ ಪರಿನಿರ್ವಾಣ ದಿನ" ಹಾಗೂ 'ಸಮನ್ವಯ ಸಮಿತಿ ಸಂಸ್ಥಾಪನಾ ದಿನ' ಕಾರ್ಯಕ್ರಮ ನಡೆಯಿತು.
ಈ ಕಾರ್ಯಕ್ರಮದಲ್ಲಿ ಪ್ರಮುಖ ಅತಿಥಿಗಳಾಗಿ ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಸಿಇಒ ಕೆ. ಎಸ್. ಲತಾಕುಮಾರಿ, ಉಪನ್ಯಾಸಕ ಡಾ. ಚಂದ್ರಪ್ಪ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
ರಾಜ್ಯ ಸರ್ಕಾರಿ ಎಸ್ಸಿ/ಎಸ್ಟಿ ನೌಕರರ ಸಮನ್ವಯ ಸಮಿತಿಯ ಅಧ್ಯಕ್ಷರಾದ ಶಿವಶಂಕರ್ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು.