ಡಿಸೆಂಬರ್ 9, 2024
ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು 'ಯೂನಿಯನ್ ಆಫ್ ಕರ್ನಾಟಕ ಕ್ವಾರಿ & ಕ್ರಷರ್ ಓನರ್ಸ್ ಅಸೋಸಿಯೇಷನ್ ಬೆಂಗಳೂರು' ಸದಸ್ಯರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.
ಈ ಪತ್ರಿಕಾಗೋಷ್ಠಿಯಲ್ಲಿ ಅಧ್ಯಕ್ಷರಾದ ಡಿ. ಸಿದ್ದರಾಜು ಅವರು ಮಾತನಾಡಿದರು.
ರಾಜ್ಯ ಸರ್ಕಾರವು ಕಲ್ಲು ಗಣಿ ಮತ್ತು ಸ್ಟೋನ್ ಕ್ರಷರ್ ಗಳಿಗೆ ವಿಧಿಸಿರುವ ನಿಯಮಗಳನ್ನು ಸರಳೀಕರಣಗೊಳಿಸಬೇಕೆಂದು ಡಿ. ಸಿದ್ದರಾಜು ಅವರು ಒತ್ತಾಯಿಸಿದರು.